ಪುತ್ತೂರು: ಸರ್ವೆ ಗ್ರಾಮದ ದಿ.ಅಚ್ಚುತ ಪೂಜಾರಿ ಸೊರಕೆಯವರ ಪತ್ನಿ ಸುನೀತಿ (92) ಶನಿವಾರ ನಿಧನರಾಗಿದ್ದಾರೆ.
ಅಲ್ಪಕಾಲದ ಅಸೌಖ್ಯದಿಂದಿದ್ದ ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸೇರಿದಂತೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.