ಹುಬ್ಬಳ್ಳಿ : ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ ಗೃಹ ಇಲಾಖೆ ಸಮರ್ಥವಾಗಿದೆ. ನಮ್ಮ ಇಲಾಖೆಯ ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರೂ ರಾಜಕೀಯ ತಾರತಮ್ಯ ಮಾಡುವುದಿಲ್ಲ ಎಂದು ತಿಳಿಸಿದರು.
ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ ಎಂದರು.
ಜೈನಮುನಿ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು. ಆರೋಪಿಗಳು ಪೊಲೀಸರ ವಶದಲ್ಲಿದ್ದು ತನಿಖೆ ಶುರುವಾಗಿದೆ ಎಂದು ತಿಳಿಸಿದರು.