ಪುತ್ತೂರು: ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಿಡ್ಲಳ್ಳಿ ಗ್ರಾಮ ಪಂಚಾಯಿತಿಯಿಂದ ನಾಮಪತ್ರ ಸಲ್ಲಿಸಿದರು.
ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತಿ ಮತ್ತು ನಿಡ್ನಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ 23ರಂದು ಉಪಚುನಾವಣೆ ನಡೆಯಲಿದೆ. ನಿಡ್ನಳ್ಳಿ ಗ್ರಾಮ ಪಂಚಾಯತಿಯ ಒಂದನೇ ವಾರ್ಡ್ ಸದಸ್ಯ ಮುರಳೀಕೃಷ್ಣ ಭಟ್ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ತೆರವಾದ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.