ಜು.30 ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ | ಪ್ರತಿಭಾ ಪುರಸ್ಕಾರಕ್ಕೆ ಮಾಹಿತಿ ನೀಡುವಂತೆ ವಿನಂತಿ

ಪುತ್ತೂರು: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ಜು.20 ರೊಳಗೆ ಸಲ್ಲಿಸುವಂತೆ ತಿಳಿಸಿದೆ.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆಧಾರ್ ಕಾರ್ಡ್‍ ಪ್ರತಿ ಹಾಗೂ ದೃಢೀಕರಣ ಅಂಕ ಪಟ್ಟಿಯನ್ನು ಸಂಘದ ಕಚೇರಿಯಲ್ಲಿ ನೀಡತಕ್ಕದ್ದು. ಜು.30 ರಂದು ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯುವ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೀಡಲಾಗುವುದು.

2022-23 ರ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಪುತ್ತೂರು ತಾಲೂಕಿನ ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಶಿವರಾಮ ಮತಾವು, ದೂರವಾಣಿ : 9448328280 ಅವರನ್ನು ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top