ಪುತ್ತೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಈ ರೀತಿಯ ದ್ವೇಷ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಅವರು ಪುತ್ತೂರು ನಗರದ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮುನಿಗಳು, ಉದ್ಯಮಿಗಳು ಜತೆಗೆ ಎಲ್ಲಿಂದಲೋ ಉದ್ಯೋಗ ಅರಸಿ ಬಂದ ಕಾರ್ಮಿಕರ ಹತ್ಯೆಗಳು, ಎರಡು ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಡಬ್ಬಲ್ ಮರ್ಡರ, ಒಟ್ಟಾರೆ ಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತಿದೆ. ಜನರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳುವಂತಾಗಿದೆ. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದ ಅವರು, ಈ ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ನಡೆದ ರೈತರ ಆತ್ಮಹತ್ಯೆಗೆ ಲೆಕ್ಕವಿಲ್ಲ. ಅದೇ ರೀತಿ ಈ ಬಾರಿ ಆಡಳಿತದಲ್ಲೂ ರೈತರ ಆತ್ಮಹತ್ಯೆ ಪ್ರಕರಣ ಜಾಸ್ತಿಯಾಗಲಿವೆ ಎಂದು ಹೇಳಿದರು.
ಹತ್ಯೆ ಪ್ರಕರಣಗಳ ಜತೆಗೆ ರೇಟ್ ಫಿಕ್ಸ್, ವರ್ಗಾವಣೆ ದಂಧೆಗಳು ನಡೆದು ಮುಖ್ಯಮಂತ್ರಿ-ಉಪಮುಖ್ಯಂತ್ರಿಗಳ ನಡುವೆಯೇ ಗೊಂದಲ ಏರ್ಪಟ್ಟಿದೆ ಎಂದು ತಿಳಿಸಿದರು.
ಕಳೆದ ಬಾರಿಯ ಬೊಮ್ಮಾಯಿ ಸರಕಾರ ಸಾವಿರಾರು ಕೋಟಿ ಅನುದಾನ ತಂದು ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದೀಗ ಕಾಂಗ್ರೆಸ್‍ಸರಕಾರ ಹಿಂದಿ ಬಾರಿ ಅನುದಾನಗಳಿಗೆ ತಡೆಯೊಡ್ಡುವುದು, ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಾಸು ತೆಗೆದುಕೊಳ್ಳುವ ಮೂಲಕ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಸರಕಾರ ದ್ವೇಷ ರಾಜಕಾರಣ ಬಿಟ್ಟು ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಕ್ರಮ ಕೈಗೊಳ್ಳಲಿ, ಹಿಂದಿನ ಸರಕಾರದ ಪಾಸ್ ಮಾಡಿದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.ರು.
ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಪಕ್ಷೇತರ ಅಭ್ಯರ್ಥಿಯಿಂದಾಗಿ ವ್ಯತ್ಯಾಸ ಉಂಟಾಗಿದೆ. ಯಾವುದೇ ಗೊಂದಲ ಇದ್ದರೂ ಅದನ್ನು ರಾಷ್ಟ್ರೀಯ ನಾಯಕರು ಸರಿ ಮಾಡುತ್ತಾರೆ ಎಂದು ಮಧ್ಯಮದವರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್, ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಅಪ್ಪಯ್ಯ ಮಣಿಯಾಣಿ ಉಪಸ್ಥಿತರಿದ್ದರು.