ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಶಸ್ವಿ ಉಡಾವಣೆಗೆ ಪ್ರಾರ್ಥನೆ

ಪುತ್ತೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಯಶಸ್ವಿ ಉಡಾವಣೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಪುತ್ತೂರು ನಗರ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ಅಜಿತ್ ರೈ ಹೊಸಮನೆ, ಯುವರಾಜ ಪೆರಿಯತ್ತೋಡಿ, ದಿನೇಶ್ ಪಂಜಿಗ, ಸಂತೋಷ್ ರಾವ್, ರಾಮಪ್ರಸಾದ್ ಮಯ್ಯ, ಧನರಾಜ್ ಬೆಳ್ಳಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top