ಆರ್ಯಾಪು, ನಿಡ್ಪಳ್ಳಿ ಗ್ರಾಪಂ ಉಪ ಚುನಾವಣೆ | ಆರು ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ಪುತ್ತೂರು: ಆರ್ಯಾಪು ಹಾಗೂ ನಿಡ್ನಳ್ಳಿ ಗ್ರಾ.ಪಂಗಳಲ್ಲಿ ತಲಾ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಆರು ಮಂದಿ ಸದಸ್ಯರು ಅಂತಿಮ ಕಣದಲ್ಲಿದ್ದಾರೆ.

ಸದಸ್ಯರಿಬ್ಬರ ನಿಧನದಿಂದ ತೆರವಾದ ತಲಾ ಒಂದು ಸ್ಥಾನಕ್ಕೆ ಜು.23ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು ಆರು ಮಂದಿ ಅಂತಿಮ ಕಣದಲ್ಲಿದ್ದಾರೆ. ಹೀಗಾಗಿ ಎರಡೂ ಪಂಚಾಯತ್‌ಗಳಲ್ಲಿಯೂ ತಲಾ ಒಂದು ಸ್ಥಾನಕ್ಕೆ ತ್ರಿಕೋಣ ಸ್ಪರ್ಧೆ ಏರ್ಪಡಲಿದೆ.

ನಿಡ್ನಳ್ಳಿ ಗ್ರಾ.ಪಂನ ನಿಡ್ನಳ್ಳಿ ವಾರ್ಡ್ 2ರ ಸಾಮಾನ್ಯ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ. ಚಂದ್ರಶೇಖರ ಪ್ರಭು ಗೋಳಿತ್ತಡಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಅಂತಿಮ ಕಣದಲ್ಲಿದ್ದಾರೆ. ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜಗದೀಶ ಭಂಡಾರಿ ಗೆನಸಿನಕುಮೇರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜಿ.ಪುರುಷೋತ್ತಮ ಪ್ರಭು ಅಬ್ಬುಗದ್ದೆ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಅಂತಿಮ ಕಣದಲ್ಲಿದ್ದಾರೆ.



































 
 

ಜು.15 ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು, ಆರ್ಯಾಪು ಗ್ರಾ.ಪಂನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಸದಸ್ಯ ವಸಂತ ಶ್ರೀದುರ್ಗಾ, ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ನವೀನ ತಮ್ಮ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ನಿಡ್ನಳ್ಳಿ ಗ್ರಾ.ಪಂನಲ್ಲಿ ನಾಮಪತ್ರ ಸಲ್ಲಿಸಿದ್ದ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳಾದ ಕುಮಾರ ನರಸಿಂಹ ಭಟ್, ಕೆ.ನಾರಾಯಣ ಪಾಟಾಳಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹರೀಶ್ ಕುಮಾರ್ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡು ಕಣದಿಂದ ಹಿಂದೆ ಸರಿದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top