ಉಯ್ಯಾಲೆಯಿಂದ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ: ಬಾಲಕನೋರ್ವ ಸೀರೆ ಅಳವಡಿಸಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಭಾನುವಾರ ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಶ್ರೀಶ (13) ಮೃತಪಟ್ಟ ಬಾಲಕ.

ಮುಂಡಾಜೆ ಶಾಲೆಯೊಂದರ 8 ನೇ ತರಗತಿ ವಿದ್ಯಾರ್ಥಿಯಾಗಿರುವ ಶ್ರೀಶ ಉಯ್ಯಾಲೆಯಿಂದ ಬಿದ್ದಿದ್ದನ್ನು ಗಮನಿಸಿದ ಆತನ ತಾಯಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯದರೂ ಅಲ್ಲಿ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ಬಾಲಕನಿಗೆ ತಂದೆ, ತಾಯಿ ಹಾಗೂ ಸಹೋದರಿ ಇದ್ದಾರೆ































 
 

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top