ಪುತ್ತೂರು: ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ವಿಘ್ನೇಶ್ ಮಡ್ ಬ್ಲಾಕ್ ಸಂಸ್ಥೆ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದು, ಮಡ್ ಬ್ಲಾಕ್ ಜತೆಗೆ ಚಿಕ್ಕಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ಇಂಟರ್ ಲಾಕ್ಸ್, ಹೋಲೋಬ್ಲಾಕ್ಸ್ ಉತ್ಪನ್ನಗಳ ತಯಾರಿಕಾ ಘಟಕ ಇಂದು ಶುಭಾರಂಭಗೊಳ್ಳಲಿದೆ.
ಗುಣಮಟ್ಟ, ವಿಶ್ವಾಸಾರ್ಹತೆ ಜತೆಗೆ ಕಡಿಮೆ ಖರ್ಚಿನಲ್ಲಿ ಸುಂದರ ಕಟ್ಟಡ ನಿರ್ಮಾಣಕ್ಕೆ ಹೆಸರುವಾಸಿಯಾಗಿರುವ, ಕಳೆದ ಹತ್ತು ವರ್ಷಗಳಿಂದ ವ್ಯವಹಾರ ನಡೆಸುತ್ತಿರುವ ವಿಘ್ನೇಶ್ ಮಡ್ ಬ್ಲಾಕ್ ಸಂಸ್ಥೆಯ ಮತ್ತೊಂದು ಘಟಕ ಉದ್ಘಾಟನೆಗೊಳ್ಳಲಿದೆ.
ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಮಾಜಿ ಶಾಸಕಿ ಶಕುಂತಳ ಟಿ. ಶೆಟ್ಟಿ ದೀಪ ಬೆಳಗಿಸುವರು. ಜನಜಾಗೃತಿ ವೇದಿಕೆ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಂಪ್ಯ ಅಕ್ಷಯ ಕಾಲೇಜಿನ ಸಂಚಾಲಕ ಜಯಂತ ನಡುಬೈಲು, ಮಹಾವೀರ ಮೆಡಿಕಲ್ ಸೆಂಟರ್ ನ ವೈದ್ಯ ಡಾ.ಅಶೋಕ್ ಪಡಿವಾಳ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಮಾಲಕ ಚಿದಾನಂದ ರೈ ತಿಳಿಸಿದ್ದಾರೆ.