ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಚಾರ್ಮಾಡಿಯಲ್ಲಿ ಪತ್ತೆಹಚ್ಚಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಧರ್ಮಸ್ಥಳ ಎಸ್.ಐ. ಅನಿಲ್ ಕುಮಾರ್ ನೇತೃತ್ವದ ತಂಡ ವಾಹನ ಚಾರ್ಮಾಡಿಯಲ್ಲಿ ತಪಾಸಣೆ ನಡೆಸಿದಾಗ ಈ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಲಾರಿ ಚಾಲಕ ಅನ್ವರ್ ಎಂಬಾತನನ್ನು ಈ ಕುರಿತು ವಿಚಾರಿಸಿದಾಗ ಆತನ ಬಳಿ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ.
ಸರಕಾರಕ್ಕೆ ಯಾವುದೇ ರಾಜಸ್ವವನ್ನು ಪಾವತಿಸದೆ ಮರಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆತಲಾಯಿತು. ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ.