ಪುತ್ತೂರು: ಇಲ್ಲಿಯ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ರಾಷ್ಟೀಯ ಸೇನಾ ಯೋಜನೆಯ (ಎನ್ಸಿಸಿ) ಅಧಿಕಾರಿ ಲೆಫ್ಟಿನೆಂಟ್ ಭಾಮಿ ಅತುಲ್ ಶೆಣೈ ಅವರಿಗೆ ಎನ್ಸಿಸಿಯಲ್ಲಿ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿಯಿಂದ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಯಿತು.
ಮಡಿಕೇರಿ ಬೆಟಾಲಿಯನ್ ನ ಕಮಾಂಡಿಂಗ್ ಆಫೀಸರ್ ಕರ್ನಲ್ ಝೆಡ್.ಜಿ.ಅರ್ಹನ ಹಾಗೂ ಆಡಳಿತಾಧಿಕಾರಿ ಕರ್ನಲ್ ವಿ ಡಿ ಚಾಕೋ ಅವರು ಈ ಗೌರವ ಪತ್ರವನ್ನು ಮಡಿಕೇರಿ ಬೆಟಾಲಿಯನ್ ನಲ್ಲಿ ನೀಡಿ ಗೌರವಿಸಿದರು.
ಭಾಮಿ ಅತುಲ್ ಶೆಣೈ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಹಾಗೂ ಉಪನ್ಯಾಸಕೇತರ ವರ್ಗದವರು ಶುಭ ಹಾರೈಸಿದ್ದಾರೆ