ಪುತ್ತೂರು: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಜೈನ ಮುನಿಯವರ ಹತ್ಯೆಯನ್ನು ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾಳೆ (ಜು.18) ಬೆಳಿಗ್ಗೆ 11.30 ಕ್ಕೆ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಹಿಂದುಗಳ ಭೂಮಿಯನ್ನ ಕಬಳಿಸುವ ವಕ್ಫ್ ಬೋರ್ಡ್ ಕಾಯಿದೆಯನ್ನು ರದ್ದುಗೊಳಿಸಬೇಕು ಎಂಬ ಆಗ್ರಹದೊಂದಿಗೆ ಆಂದೋಲನ ನಡೆಯಲಿದೆ.
ಪುತ್ತೂರಿನ ಮಿನಿ ವಿಧಾನಸೌಧ ಮುಂಭಾಗದ ಅಮರ್ ಜವಾನ್ ವೃತ್ತದ ಬಳಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.