ಪುತ್ತೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನೀಡುವ 2022-23ನೇ ಸಾಲಿನ ಪುತ್ತೂರು ತಾಲೂಕಿನ ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತ ಪ್ರಶಸ್ತಿಗೆ ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಆಯ್ಕೆಯಾಗಿದ್ದಾರೆ.

ಸತ್ಯನಾರಾಯಣ ಅಡಿಗರು ಕಳೆದ 30 ವರ್ಷಗಳಿಂದ ಕೃತಕ ಗರ್ಭಧಾರಣಾ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಲಶೇಖರ ಹಾಲು ಒಕ್ಕೂಟದ ಸಮಾಲೋಚನಾ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದ.ಕ.ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ನಿರ್ದೇಶಕರಾದ ನಾರಾಯಣ ನೆಲ್ಲಿತ್ತಿಮಾರ್, ಜಯರಾಮ ರೈ ಬಳಜ್ಜ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಕೆ.ಅಶೋಕ್ ಪ್ರಶಸ್ತಿ ಪ್ರದಾನ ಮಾಡಿದರು.