ಪುತ್ತೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರದೀಪ್ ರೈ ಅವರು ಬೊಳುವಾರಿನಲ್ಲಿ ಆಸ್ಪತ್ರೆಯೊಂದ ಬಳಿ ಕಾರು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ ಕೈಯಲ್ಲಿದ್ದ ಉಂಗುರ ಹಾಗೂ 9 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಇದೆ.
ಪ್ರದೀಪ್ ರೈ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರದೀಪ್ ರೈ ವಿಧಾನಸಭಾ ಚುನಾವಣೆ ವೇಳೆ ಕೊಡಗು, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಅಲ್ಲದೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಯಶಸ್ವಿಯಾಗಿದ್ದರು.