ಮಣಿಪುರ ಬೆತ್ತಲೆ ಮೆರವಣಿಗೆ | ಓರ್ವ ಆರೋಪಿ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು

ಹೊಸದಿಲ್ಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತವಾಗಿ ಮೆರವಣಿಗೆ ಮಾಡಿದ ಕರಾಳ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಎಂಬಾತನ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದೆ.

ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೊಕ್ಸಿ ಜಿಲ್ಲೆಯಲ್ಲಿ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡ ಮಾಡಲಾಗಿದೆ ಎನ್ನಲಾಗಿದೆ. ಈ ವಿಡಿಯೋ ಈಗ ವೈರಲ್ ಆಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ನಡುವೆ ಓರ್ವ ಆರೋಪಿಯ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ವಯಂಪ್ರೇರಿತವಾಗಿ ದೂರು ದಾಖಲು ಮಾಡಿಕೊಂಡ ಮಣಿಪುರ ಪೊಲೀಸರು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top