ಬಿಲ್ಲವ ಸಮಾಜಕ್ಕೆ ಮುಖ್ಯಮಂತ್ರಿ ಸಹಿತ ಕಾಂಗ್ರೆಸ್ ಅನ್ಯಾಯ ಮಾಡಿಲ್ಲ | ಶಿಕ್ಷಣ ಸಚಿವ ಮಧು ಬಂಗಾರಪ್ಪ

ಪುತ್ತೂರು: ನಾನು ಕೂಡಾ ಬಿಲ್ಲವ. ನಮ್ಮ ಬಿಲ್ಲವ, ಈಡಿಗ, ನಾಮದಾರಿ ಸಮಾಜಕ್ಕೆ ಯಾವುದೇ ತರದ ಅನ್ಯಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರಾಗಲಿ, ಕಾಂಗ್ರೆಸ್ ಆಗಲಿ ಮಾಡಿಲ್ಲ. ನಮ್ಮ ಸಮಾಜಕ್ಕೆ ಪ್ರಾತಿನಿಧ್ಯ ಕಾಂಗ್ರೆಸ್ ನೂರಕ್ಕೆ ನೂರು ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪುತ್ತೂರು ಗೆಜ್ಜೆಗಿರಿ ಕ್ಷೇತ್ರಕ್ಕೆ ತೆರಳುವ ಮುಂದೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯ ಬಳಿಕ ಮಾತನಾಡಿದರು.

ಕಾಂಗ್ರೆಸ್ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರು ಮಂಗಳೂರಿನಲ್ಲಿ ಬಿಲ್ಲವ ಮುಖಂಡರ ಸಭೆಯಲ್ಲಿ ಹೇಳಿದ ಮಾತಿಗೆ ಪುತ್ತೂರಿನಲ್ಲಿ ಅವರು ಪತ್ರಿಕಾ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ್ದಾರೆ.



































 
 

ಕಾಂಗ್ರೆಸ್ ನಮ್ಮ ಸಮಾಜಕ್ಕೆ ಪ್ರಾತಿನಿಧ್ಯ ನೀಡಿದೆ. ಕರಾವಳಿ ಭಾಗಕ್ಕೆ ನಿಗಮವನ್ನು ನೀಡಲಿದೆ. ಬಿಲ್ಲವ, ಈಡಿಗರ, ದೀವರ ಸಮಾಜಕ್ಕೆ ಯಾವುದೇ ಅನ್ಯಾಯವನ್ನು ಕಾಂಗ್ರೆಸ್ ಸರಕಾರ ಮಾಡಿಲ್ಲ. ಕಡೆಗಣಿಸಿಯೂ ಇಲ್ಲ. ಕಡೆಗಣಿಸಲು ನಾವು ಬಿಡುವುದೂ ಇಲ್ಲ. ಇದರ ಜೊತೆಗೆ ನಾನು ಇಲ್ಲಿ ಅಧಿಕಾರದಲ್ಲಿರುವಾಗ ಆ ತರದ ಪ್ರಶ್ನೆ ಉದ್ಭವವೂ ಆಗುವುದಿಲ್ಲ. ಬಿ.ಕೆ.ಹರಿಪ್ರಸಾದ್ ಅವರು ಯಾವ ಭಾವನೆಯಿಂದ ಮಾತನಾಡಿದ್ದಾರೆ ಎಂದು ಗೊತ್ತಿಲ್ಲ. ಅವರಲ್ಲಿ ಚರ್ಚೆ ಮಾಡುತ್ತೇವೆ. ನಾನು ಅವರ ಹೇಳಿಕೆಯನ್ನು ಕೇಳಿದ್ದೇನೆ. ಅವರು ಸಿದ್ದರಾಮಯ್ಯ ಅವರಿಗೆ ಹೇಳಿದ ಮಾತಲ್ಲ ಎಂದವರು ಹೇಳಿದರು.

ಈ ಸಂದರ್ಭದಲ್ಲಿ ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಅಶೋಕ್ ಕುಮಾರ್ ರೈವರನ್ನುಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಅಧ್ಯಕ್ಷ ರಾಜಾರಾಮ ಕೆ.ಬಿ., ಮುಖಂಡರಾದ ಹೇಮನಾಥ ಶೆಟ್ಟಿ, ಸತೀಶ್ ಕುಮಾರ್ ಕೆಡೆಂಜಿ, ಅನಿತಾ ಹೇಮನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top