ಉಡುಪಿ : ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಕೊಲ್ಲೂರಿಗೆ ಆಗಮಿಸಿದ್ದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿ ನೀರುಪಾಲಾಗಿರುವ ಘಟನೆ ಭಾನುವಾರ ಮಧ್ಯಾಹ್ನ ವರದಿಯಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಕೆ.ಎಚ್. ನಗರದ ಸುಣ್ಣದಹಳ್ಳಿ ನಿವಾಸಿ ಶರತ್ ಕುಮಾರ್ (23) ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ.
ಭಾನುವಾರ ತನ್ನ ಸ್ನೇಹಿತರೊಂದಿಗೆ ಕೊಲ್ಲೂರಿಗೆ ಕಾರಿನಲ್ಲಿ ಕೊಲ್ಲೂರಿಗೆ ಆಗಮಿಸಿದ್ದರು. ಈ ವೇಳೆ ಶರತ್ ತನ್ನ ಸ್ನೇಹಿತರ ಜತೆಗೂಡಿ
ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದ ವೀಕ್ಷಣೆಗೆ ತೆರಳಿದ್ದರು. ಶರತ್ ಜಲಪಾತದ ಬಳಿಯಲ್ಲಿದ್ದ ಬಂಡೆ ಹತ್ತಿ ನಿಂತಿದ್ದು, ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ನೀರಿನ ರಭಸ ಜೋರಾಗಿದ್ದ ಪರಿಣಾಮ ಶರತ್ ಕೊಚ್ಚಿಕೊಂಡು ಹೋಗಿದ್ದಾರೆ. ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೊರ್ವ ಯುವಕನ ಮೊಬೈಲ್ನಲ್ಲಿ ಸೆರೆಯಾಗಿದ್ದು, ಭಾರಿ ವೈರಲ್ ಆಗುತ್ತಿದೆ. ಯುವಕನಿಗಾಗಿ ಹುಡುಕಾಟ ನಡೆಯುತ್ತಿದೆ. ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಪತ್ತೆ ಕಾರ್ಯಾಚರಣೆಗೆ ಹಿನ್ನೆಡೆಯಾಗುತ್ತಿದೆ. ಅಗ್ನಿಶಾಮಕ ದಳ ಪತ್ತೆ ಕಾರ್ಯಾಚರಣೆ ಯಲ್ಲಿ ತೊಡಗಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿದ್ದಾರೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.