ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಮೃತ್ಯು

ನೆಲ್ಯಾಡಿ: ಬೈಕೊಂದು ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ನೆಲ್ಯಾಡಿ ಮೊರಂಕಳ ನಿವಾಸಿ ಬೈಕ್ ಸವಾರ ಇಕ್ಬಾಲ್ ಮೃತಪಟ್ಟ ಯುವಕ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಣ್ಣಂಪಾಡಿ ಬಳಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ವೇಳೆ ರಸ್ತೆ ಬದಿ ಕೆಟ್ಟು ನಿಂತಿದ್ದ ಪಾರ್ಸೆಲ್ ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.































 
 

ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top