ಪುತ್ತೂರು: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಅಂಗಡಿಗಳಿಗೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ.
ಪುತ್ತೂರು ನಗರದ ಮುಖ್ಯರಸ್ತೆಯ ಅಂಗಡಿಗಳು, ವಾಣಿಜ್ಯ ಮಳಿಗೆಗಳು ಸೇರಿದಂತೆ ಹಲವು ಕಡೆ ದಾಳಿ ನಡೆಸಿದ ಅಧಿಕಾರಿಗಳು 12 ಕೆಜಿ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿಯರಾದ ಶ್ವೇತಾ ಕಿರಣ್, ವರಲಕ್ಷ್ಮೀ, ಸೂಪರ್ ವೈಸರ್ ಗಳಾದ ನಾಗೇಶ್ ಮತ್ತು ಅಮಿತ್, ರಾಧಾಕೃಷ್ಣ ಸಹಿತ ಪೌರ ಕಾರ್ಮಿಕರು ಉಪಸ್ಥಿತರಿದ್ದರು.