ದೆಹಲಿ : ಕೇಂದ್ರ ಸರ್ಕಾರ ದೇಶದ ರೈತರಿಗೆ ಸಿಹಿಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ- ಕಿಸಾನ್) ಯೋಜನೆಯ 14ನೇ ಕಂತು ಗುರುವಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಪ್ರಕಟಿಸಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿಯಲ್ಲಿ 8.5 ಕೋಟಿ ರೈತರಿಗೆ 14ನೇ ಕಂತಿನ ನಿಧಿಯನ್ನು ಜು.27 ರಂದು ಪ್ರಧಾನ ಮಂತ್ರಿಯವರು ನರೇಂದ್ರ ಮೋದಿ ವಿತರಿಸಲಿದ್ದಾರೆ.
ರಾಜಸ್ಥಾನದ ಸಿಕಾರ್‌ನಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಪಿಎಂ ಕಿಸಾನ್ ಕಂತಿನ ಹಣವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ರೈತರನ್ನು ಕುರಿತು ಮಾತನಾಡಲಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ ಪ್ರಯೋಜನ ಪಡೆಯಲು ಬಯಸುವ ರೈತರು ತಮ್ಮ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವಂತೆ ಸೂಚಿಸಲಾಗಿದೆ. ಪಿಎಂ ಕಿಸಾನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2019 ರಲ್ಲಿ ಪ್ರಾರಂಭಿಸಿದರು.
ಕೆಲವು ವಿನಾಯಿತಿಗಳಿಗೆ ಒಳಪಟ್ಟು ಕೃಷಿಯೋಗ್ಯ ಭೂಮಿಯೊಂದಿಗೆ ದೇಶಾದ್ಯಂತ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಈ ಯೋಜನೆಯಡಿ ವಾರ್ಷಿಕ ಮೂರು ಮಾಸಿಕ ಕಂತುಗಳಲ್ಲಿ ತಲಾ 6000 ರೂ. 2000 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗುವುದು.