ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಡಿ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು.

ದೀಪ ಪ್ರಜ್ವಲನೆ ಮಾಡಿ ಭಾರತಾಂಬೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ಐಕ್ಯೂಎಸಿ ಸಂಯೋಜಕರು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.