ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಕುರಿತು ಅಂತರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023”ಕ್ಕೆ ಚಾಲನೆ

ಪುತ್ತೂರು: ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ತಾವು ಮಾಡುವ ಕೆಲಸದ ಬಗ್ಗೆ ಸ್ಪಷ್ಟತೆ ಇರಬೇಕು . ಆ ಕೆಲಸವನ್ನು ನಿಗದಿತ ಸಮಯದಲ್ಲಿ ಮುಗಿಸುವ ಛಲ ಇರಬೇಕು ಎಂದು ಎನ್‌ಐಟಿಕೆ ಸುರತ್ಕಲ್‌ನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮೋಹಿತ್.ಪಿ.ತಹಿಲಿಯಾನಿ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗ ಹಾಗೂ ಯುನಿವರ್ಸಿಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಎನ್ನುವ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2023 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಹೊಸ ಹೊಸ ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ಅದರಿಂದ ಸಮಾಜಕ್ಕೆ ಒಳಿತಾಗುವ ಉತ್ಪನ್ನಗಳನ್ನು ತಯಾರಿಸುವಲ್ಲಿ ಶ್ರಮಿಸಬೇಕು ಎಂದ ಅವರು, ಕಂಪೆನಿಗಳು ಪ್ರತಿಭಾವಂತರಿಗೆ ಹೆಚ್ಚು ಅವಕಾಶಗಳನ್ನು ನೀಡುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಉತ್ಕೃಷ್ಟತೆಯನ್ನು ಸಾಧಿಸಲು ಪ್ರಯತ್ನಿಸಬೇಕು ಎಂದರು.































 
 

ಗೌರವ ಅತಿಥಿಗಳಾಗಿ ಆಗಮಿಸಿದ ಸುಲ್ತಾನೇಟ್ ಆಫ್ ಒಮನ್ ಮಸ್ಕತ್ತಿನ ಬ್ಯಾಂಕಿಂಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ ಡಾ.ಆನಂದ್ ಸೂರ್ಯನಾರಾಯಣ ಮಾತನಾಡಿ, ಜೀವನದಲ್ಲಿ ಸಾಮರ್ಥ್ಯ, ಸ್ಪರ್ಧೆ ಮತ್ತು ಬದಲಾವಣೆ ಈ ಮೂರು ವಿಷಯಗಳು ಅಗಾಧ ಪರಿಣಾಮವನ್ನು ಬೀರುತ್ತವೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ ದೃಷ್ಟಿ-2023 ರಂತಹ ಸಮ್ಮೇಳನಗಳು ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ತಮ್ಮ ಅತ್ಯಾಧುನಿಕ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ,  ಇಂತಹ ಸಮ್ಮೇಳನಗಳು ವಿದ್ಯಾರ್ಥಿಗಳ ಯೋಜನೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಬಿಂಬಿಸುವುದಕ್ಕೆ ಅವಕಾಶವನ್ನು ನೀಡುತ್ತವೆ ಎಂದರು.

ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್, ಇತರ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಚಾಲಕ ಎಂಬಿಎ ವಿಭಾಗದ ನಿರ್ದೇಶಕ ಡಾ.ಶೇಖರ್.ಎಸ್.ಅಯ್ಯರ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಡಾ.ರೋಬಿನ್.ಎಂ.ಶಿಂಧೆ ಪ್ರಸ್ತಾವನೆಗೈದರು. ಎಂಸಿಎ ವಿಭಾಗದ ಪ್ರೊ.ಶೈಲೇಶ್ ವಂದಿಸಿದರು. ಎಂಸಿಎ ವಿಭಾಗದ ಪ್ರೊ.ನೀಮಾ ಕಾರ್ಯಕ್ರಮ ನಿರ್ವಹಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top