ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ವಿಚಾರವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ದೇಶಾದ್ಯಂತ ಸದ್ದು ಮಾಡಿ, ಮತ್ತೆ ನ್ಯಾಯಕ್ಕಾಗಿ ಎಲ್ಲೆಡೆ ಸಂಚಲನ ಮೂಡಿಸುತ್ತಿರುವ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಬೆಳ್ತಂಗಡಿ ಕ್ಷೇತ್ರದ ಶಾಸರು ಹಾಗೂ ಕುಟುಂಬದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯನವರು ಮರುತನಿಖೆ ಎಸ್ ಐ ಟಿ ಮಾಡುವ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

 ಸೌಜನ್ಯ ಕೊಲೆ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ವಹಿಸಬೇಕೆಂದು ವಿವಿಧ ಸಂಘಟನೆಗಳ ಸದಸ್ಯರು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಈಗಾಗಲೇ ಮನವಿ ಸಲ್ಲಿಸಿದ್ದಾರೆ. ಇಷ್ಟೇ ಅಲ್ಲದೆ ಈ ಹಿಂದೆ ಸೌಜನ್ಯಳ ಕುಟುಂಬದವರೇ ನೇರವಾಗಿ ಸಿಎಂಸಿದ್ದರಾಮಯ್ಯನವರನ್ನು ಭೇಟಿ ಆಗಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಅವರು ಇಂತಹ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top