ಪುತ್ತೂರು: ಔಷಧೀಯ ಗಿಡಮೂಲಿಕೆಗಳು ನಶಿಸಿ ಹೋಗುತ್ತಿರುವ ಕಾಲ ಘಟ್ಟದಲ್ಲಿ ಅವುಗಳ ಸಂರಕ್ಷಣೆಯ ಮಹತ್ವದ ಕುರಿತು ಇಂದಿನ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪೇರಲ್ತಡ್ಕ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ಶಿಕ್ಷಕಿ ಯಶೋಧ ಹೇಳಿದರು.
ಅವರು ನರೇಂದ್ರ ಪ.ಪೂ. ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿವಿಧ ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗಾಗಿ ಔಷಧೀಯ ಸಸ್ಯಗಳ ಬಳಕೆ ಹಳೆಯ ಅಭ್ಯಾಸವಾಗಿದೆ. ಭಾರತೀಯ ವೈದ್ಯ ಪದ್ಧತಿಯ ಸಾಂಪ್ರದಾಯಿಕ ಪದ್ಧತಿಯಾದ ಆಯುರ್ವೇದವು ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆಗಳ ಪರಿಹಾರಗಳನ್ನು ವಿವರಿಸಿದೆ. ಈ ನಿಟ್ಟಿನಲ್ಲಿ ಔ?ಧೀಯ ಸಸ್ಯ ಸಂಕುಲದ ಸಂರಕ್ಷಣೆಯ ಉದ್ದೇಶದ ಜೊತೆಗೆ ಅವುಗಳ ಸಂವರ್ಧನೆ, ಬಳಕೆಯಾದಾಗ ಮಾತ್ರ ಅಂತಹ ಅಮೂಲ್ಯ ಸಂಪತ್ತನ್ನು ಉಳಿಸಲು ಸಾಧ್ಯ. ಎಂದರು.
ಈ ಸಂದರ್ಭದಲ್ಲಿ ಶಿಕ್ಷಕಿ ಯಶೋಧ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಉಪಸ್ಥಿರಿದ್ದರು. ವಿದ್ಯಾರ್ಥಿನಿ ಕು.ಅಗಮ್ಯ ಸ್ವಾಗತಿಸಿ, ವಂದಿಸಿದರು.