ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ ಇದರ ಬೆಳ್ಳಿಹಬ್ಬ ಕಾರ್ಯಕ್ರಮ ಸೆ.19 ಮಂಗಳವಾರದಿಂದ ಸೆ.22 ಶುಕ್ರವಾರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ವಿತರಣೆಗೆ ಮಂಗಳಾ ಮಂಟಪದಲ್ಲಿ ಭಾನುವಾರ ಚಾಲನೆ ನೀಡಲಾಯಿತು.

ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಅಧ್ಯಕ್ಷ ಹಾಗೂ ಬೆಳ್ಳಿ ಹಬ್ಬ ಸಮಿತಿಯ ಗೌರವಾಧ್ಯಕ್ಷ ಶಂಕರ ಭಟ್ ಬದನಾಜೆ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷ ಕೃಷ್ಣಯ್ಯ ಕೆ ವಿಟ್ಲ ಅರಮನೆ, ಗಣೇಶ್ ಸಿ, ಅಧ್ಯಕ್ಷ ಜಯರಾಮ್ ನಿಡ್ಯ, ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಗಂಗಾಧರ್ ಸಿ, ಕಾರ್ಯದರ್ಶಿ ವಿಶ್ವನಾಥ್ ಎ., ಕೋಶಾಧಿಕಾರಿ ನರೇಂದ್ರ ಸಿ., ಬಿ ಕೆ ಬಾಬು, ಕೃಷ್ಣ ಮುದೂರು, ಜಗದೀಶ್ ಎಂ., ದೀಕ್ಷಿತ್ ಎಂ., ಲೋಹಿತ್ ಎಂ., ಗಂಗಾಧರ ಕೆ. ಹಾಗೂ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಕ್ಲಬ್ ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು