ಪುತ್ತೂರು: ಪುತ್ತೂರು ಪುತ್ತೂರು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದಲ್ಲಿ “ಆಟಿ ಹಬ್ಬ-2023” ಆ.6 ಭಾನುವಾರ ಬೆಳಿಗ್ಗೆ 9 ರಿಂದ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಧವಿ ಕೆ. ದರ್ಬೆ ನೆರವೇರಿಸಲಿದ್ದು, ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ. ಗೌಡ ಅಧ್ಯಕ್ಷತೆ ವಹಿಸುವರು.
ಬಳಿಕ 9.30 ಕ್ಕೆ ವಿವಿಧ ವಿಭಾಗಗಳಲ್ಲಿ ಮಕ್ಕಳಿಗೆ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ, ಪುರುಷರು, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳಾದ ಚೆನ್ನೆಕಾಯಿ ಹೆಕ್ಕುವ ಸ್ಪರ್ಧೆ, ಅಡಿಕೆ ಹಾಳೆಯಲ್ಲಿ ಕುಳಿತ ಎಳೆಯುವುದು, ಲಿಂಬೆ ಚಮಚ ಓಟ, ಜಾನಪದ ಗೀತೆ, ಶೋಭಾನೆ ಹಾಡು, ಆಟಿ ತಿಂಡಿ ತಯಾರಿ ಸ್ಪರ್ಧೆ, ಚೆನ್ನೆಮಣೆ ಆಟ, ತೆಂಗಿನಕಾಯಿ ಕುಟ್ಟುವ ಸ್ಪರ್ಧೆ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ. ಗೌಡ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು, ಸುಳ್ಯ ನೆಹರು ಮೆಮೋರಿಯಲ್ ಕನ್ನಡ ಪ್ರಾಧ್ಯಪಕಿ ಅನುರಾಧಾ ಕುರುಂಜಿ ವಹಿಸಲಿದ್ದಾರೆ. ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಯುವ ಒಕ್ಕಲಿಗ ಯುವ ಗೌಡ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಕೆಡೆಂಜಿ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ ಗೌರವ ಉಪಸ್ಥಿತರಿರುವರು.
ಮಧ್ಯಾಹ್ನ 1.30 ಕ್ಕೆ ಆಟಿ ತಿಂಗಳ ಸಾಂಪ್ರದಾಯಿಕ ಅಡುಗೆಗಳನ್ನೊಳಗೊಂಡ ವಿಶೇಷ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.