ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಆ.6 ಭಾನುವಾರ ನಡೆಯಲಿದೆ.
ವಿಡಿಯೋ ಕಾನ್ಸೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಶೀಲಾನ್ಯಾಸ ನೆರವೇರಿಸಲಿದ್ದಾರೆ.
ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಪ್ರಧಾನಿ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ಅವರನ್ನು ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಅಭಿನಂದಿಸಿದ್ದಾರೆ. 2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ
ಪಡಿಸಲಾಗುವುದೆಂದು ಘೋಷಿಸಲಾಗಿತ್ತು. ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.