ಉಡುಪಿ: ಉಡುಪಿಯಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ಘಟನೆ ಖಂಡಿಸಿ ಇಂದು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರಕರಣದ ಸಮಗ್ರ ತನಿಖೆಗೆ ಹಕ್ಕೊತ್ತಾಯ ಮಂಡಿಸಿ, ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್. ಯು, ಉಮಾನಾಥ್ ಕೋಟ್ಯಾನ್, ಹರೀಶ್ ಪೂಂಜಾ, ಪ್ರತಾಪ್ ಸಿಂಹ ನಾಯಕ್, ಕು. ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.