ಉಜಿರೆ: ಸೌಜನ್ಯ ಸಾವಿಗೆ ನ್ಯಾಯ ಕೊಡಿ, ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನಿಲ್ಲಿಸಿ ಶ್ಲೋಗನ್ ನೊಂದಿಗೆ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ಸಂಘಟನೆ ಮೂಲಕ ಶ್ರೀ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ಬೃಹತ್ ಹಕ್ಕೊತ್ತಾಯ ಸಭೆಗೆ ಈಗಾಗಲೇ ಚಾಲನೆ ನೀಡಲಾಗಿದೆ.
ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ವಿವಿಧ ರೀತಿಯಲ್ಲಿ ಸುಳ್ಳು ಆರೋಪಗಳನ್ನು ಮಾಡಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಹಿನ್ನಲೆಯಲ್ಲಿ ಈ ಬೃಹತ್ ಹಕ್ಕೊತ್ತಾಯ ಸಭೆಯನ್ನು ಮಾಡಲಾಗುತ್ತಿದೆ.
ಈ ಹಕ್ಕೊತ್ತಾಯ ಸಭೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರದ ಭಕ್ತಾದಿಗಳು ಪಾಲ್ಗೊಳ್ಳುತ್ತಿದ್ದಾರೆ.