ಮಾಣಿಲ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಯಶಸ್ಸಿನ ಮೂಲಮಂತ್ರ ಎಂದು ವಿಟ್ಲ ರೋಟರಿ ಕ್ಲಬ್ ನ ಯೋಜನಾ ನಿರ್ವಾಹಕ ಡಾ. ವಿ. ಕೆ ಹೆಗ್ಗಡೆ ಹೇಳಿದರು.
ಅವರು ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ವಿಟ್ಲ ರೋಟರಿ ಕ್ಲಬ್ ಪ್ರಾಯೋಜಕತ್ವದಲ್ಲಿ ನಡೆದ ‘ವನಸಿರಿ’ ಹಾಗೂ ‘ವಿದ್ಯಾಸಿರಿ’ ವಿಶಿಷ್ಟ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳು ಹಾಗೂ ಗಿಡಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮ ನಡೆಯಿತು.
ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಕಿರಣ್ ಕುಮಾರ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ನಿಕಟ ಪೂರ್ವ ಅಧ್ಯಕ್ಷ ಪ್ರಕಾಶ್ ನಾಯಕ್ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಹಾಗೂ ಗಿಡಗಳನ್ನು ವಿತರಿಸಲಾಯಿತು.
ಎಸ್ ಡಿ ಎಂಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ಸ್ಥಳದಾನಿ ಮುರುವ ನಡುಮನೆ ಮಹಾಬಲ ಭಟ್ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಭುವನೇಶ್ವರ್ ಸಿ ಸ್ವಾಗತಿಸಿದರು. ವಿಟ್ಲ ರೋಟರಿ ಕ್ಲಬ್ ಕಾರ್ಯದರ್ಶಿ ಮೋಹನ್ ಮೈರ ವಂದಿಸಿದರು. ಶಿಕ್ಷಕ ಸುಧೀಶ್ ಕೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ವಿವಿಧ ಪದಾಧಿಕಾರಿಗಳು , ಶಾಲಾ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿ ವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ ಶಾಲಾವರಣದಲ್ಲಿ ವಿವಿಧ ಗಿಡಗಳನ್ನು ನೆಡುವ ಮೂಲಕ ವನಸಿರಿ ಕಾರ್ಯಕ್ರಮ ನಡೆಯಿತು.