ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಾಣಿಜ್ಯ, ವಿಜ್ಞಾನ, ಸಾಹಿತ್ಯ ಸಂಘಗಳ ಉದ್ಘಾಟನೆ

ಪುತ್ತೂರು: ಪ್ರಜಾಪ್ರಭುತ್ವದ ಅರಿವು ವಿದ್ಯಾರ್ಥಿಗಳಿಗೆ ಆಗಬೇಕಾದರೆ ವಿದ್ಯಾರ್ಥಿ ಸಂಘಗಳು ಸಕ್ರಿಯವಾಗಬೇಕು. ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು. ಕಲಿಕೆಯ ಜೊತೆಗೆ ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು ಎಂದು ಬೆಂಗಳೂರಿನ ಹೈಕೋರ್ಟ್ ನ್ಯಾಯವಾದಿ ಸುಯೋಗ್ ಹೇರಳೆ. ಇ. ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿ ಸಂಘಗಳು ಮಾರ್ಗಸೂಚಿಗಳಾಗಲಿವೆ. ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸಬಲ್ಲ ಶಕ್ತಿ ಇರುವ ವಿದ್ಯಾರ್ಥಿ ಜೀವನದಲ್ಲಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಾಧ್ಯ.ಜಗತ್ತಿನ ಕತ್ತಲೆಯನ್ನು ಹೋಗಲಾಡಿಸುವ ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿದೆ.ಉತ್ತಮ ನಾಯಕತ್ವ ಗುಣಮಟ್ಟವನ್ನು ಬೆಳೆಸಿಕೊಂಡಾಗ ಪ್ರಪಂಚವನ್ನೇ ಬದಲಿಸುವಂತಹ ಪ್ರಜೆಗಳಾಗಬಹುದು ಎಂದು ಹೇಳಿದರು.































 
 

ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ ನರೇಂದ್ರ ಪ.ಪೂ.ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಸಂಪತ್ ಕುಮಾರ್ ಮಾತನಾಡಿ, ಜೀವನದಲ್ಲಿ ವಿದ್ಯಾರ್ಥಿಗಳು ಕಲಿಕೆಯ ಗುಣಮಟ್ಟವನ್ನು ವೃದ್ಧಿಸಿ ಏಕತೆಯಿಂದ ಒಗ್ಗೂಡಿಕೊಂಡು ನಿರಂತರ ಪರಿಶ್ರಮದಿಂದ ಸಾಧಿಸಬೇಕಾದ ಅನಿವಾರ್‍ಯತೆಯಿದೆ. ಸಮಾಜಕ್ಕೆ ಸಹಕಾರಿಯಾಗುವಂತಹ ಶಿಕ್ಷಣವು ವಿದ್ಯಾರ್ಥಿಗಳಿಗೆ ಸಿಗಬೇಕಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘವು ಹೆಜ್ಜೆ ಹಾಕಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಉದ್ಯಮಿ ಸಚಿನ್ ನಾಯಕ್ ಎಸ್., ನರೇಂದ್ರ ಪ.ಪೂ.ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ, ಸಂಚಾಲಕ ಸಂತೋಷ ಬಿ. ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

ವೇದಿಕೆಯಲ್ಲಿವಿದ್ಯಾರ್ಥಿ ಸಂಘದ ನಾಯಕ ದ್ವಿತೀಯ ವಿಜ್ಞಾನ ವಿಭಾಗದ ಹರ್ಷೇಂದ್ರ ಪ್ರಸಾದ್, ಕಾರ್‍ಯದರ್ಶಿ ನೇತ್ರಾ ಭಟ್, ಜೊತೆ ಕಾರ್‍ಯದರ್ಶಿ ಅಗಮ್ಯ, ಕ್ರೀಡಾ ಸಂಘದ ನಾಯಕ ಸೃಜನ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ.ಚಸ್ಮಿತಾ ವಂದಿಸಿದರು. ಭೂಮಿಕಾ ಕಾರ್‍ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top