ಚಂದ್ರನ ಕಕ್ಷೆ ಸೇರಿದ ಚಂದ್ರಯಾನ ಗಗನ ನೌಕೆ | ಟ್ವಿಟರ್ ಖಾತೆಯಲ್ಲಿ  ಹಂಚಿಕೊಂಡ ಚಂದ್ರಯಾನ್-3 ಮಿಷನ್

ದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ.

ಚಂದ್ರಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಚಂದ್ರಯಾನ್-3 ಮಿಷನ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಮೂನ್ ಮಿಷನ್ ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ.































 
 

ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾ‌ ಆರ್ಬಿಟ್ ಇನ್ನೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಲ್ಯಾಂಡರ್ ಸದ್ಯ ಚಂದ್ರನ ಗುರುತ್ವಾಕರ್ಷಣೆ ಅನುಭವಿಸುತ್ತಿರುವುದಾಗಿ ಇಸ್ರೋ ಹೇಳಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top