ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಶೀಘ್ರದಲ್ಲಿ ಇತ್ಯರ್ಥವಾಗಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪುತ್ತೂರು ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದಿಂದ ಆ.7 ಸೋಮವಾರ ಪುತ್ತೂರಿನಲ್ಲಿ ಕಾಲ್ನಡಿಗೆ ಮತ್ತು ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.
ಬೆಳಿಗ್ಗೆ ಗಂಟೆ 10 ಗಂಟೆಗೆ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ನಂತರ ಅಲ್ಲಿಂದ ಕಾಲ್ನಡಿಗೆ ಮೂಲಕ ಮುಖ್ಯರಸ್ತೆಯಾಗಿ ಸಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸೌಜನ್ಯ ತಾಯಿ ಕುಸುಮಾವತಿ, ಮಾಜಿ ಶಾಸಕ ಸಂಜೀವ ಮಠಂದೂರು, ಬಜರಂಗದಳ ವಿಭಾಗ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ ವಿಹಿಂಪ ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ, ಕಾರ್ಯದರ್ಶಿ ಸತೀಶ್ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಸಹಿತ ನೂರಾರು ಮಂದಿ ಭಾಗವಹಿಸಿದ್ದರು
























