ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು:ಸ್ಯಾಂಡಲ್‌ವುಡ್ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ(spandana passed away) ನಿಧನ ಹೊಂದಿದ್ದಾರೆ. ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಕತ್’ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.ಈ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ.

ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ರಾಘವೇಂದ್ರ 2007, ಆಗಸ್ಟ್ 26 ರಂದು ಸ್ಪಂದನ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರವಿವಾಹ 16 ನೇ ವಾರ್ಷಿಕೋತ್ಸವಕ್ಕೆ ಕೇವಲ ಕೆಲವೇ ದಿನಗಳು ಬಾಕಿ ಇರುವ ನಡುವೆ ಈ ದಾರುಣ ಘಟನೆ ಸಂಭವಿಸಿದೆ. ಸ್ಯಾಂಡಲ್ ವುಟ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರಿಗೆ ಹೃದಯಾಘಾತ ಮತ್ತು ಲೋ ಬಿಪಿಯ ಪರಿಣಾಮ ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top