ಪುತ್ತೂರು: ಪಕೃತಿ ವಿಕೋಪ ಸೇರಿದಂತೆ ಇತರೆ ಯಾವುದೇ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ. ಎನ್.ಡಿ.ಆರ್. ಎಫ್. ಜನರ ಜೀವ ಉಳಿಸುವ ಮಹತ್ವದ ಕಾರ್ಯ ಮಾಡುತ್ತದೆ.ಈ ಸಂದರ್ಭಗಳಲ್ಲಿ ಆಗುವ ಜೀವಹಾನಿಯನ್ನು ಕಡಿಮೆ ಮಾಡಲು ಯೋಜಿತ ರೀತಿಯಲ್ಲಿ ತುರ್ತುಸ್ಥಿತಿಯ ಅರ್ಥದಲ್ಲಿ ವಿಪತ್ತುಗಳಿಗೆ ಪ್ರತಿಕ್ರಿಯಿಸಲು ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಯೋಜಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ 10 ನೇ ಬೆಟಾಲಿಯನ್ ನ ಟೀಮ್ ಕಮಾಂಡರ್ ಅಜಯ್ ಕುಮಾರ್ ಹೇಳಿದರು.
ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜನರು ಹೇಗೆ ತಮ್ಮನ್ನು ತಾವು ರಕ್ಷಣೆ ಮಾಡಬೇಕು ಎಂಬುದರ ಕುರಿತು ಹಮ್ಮಿಕೊಂಡಿದ್ದ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಪಘಾತವಾದಾಗ, ಹೃದಯಾಘಾತವಾದಾಗ ಪ್ರಥಮ ಚಿಕಿತ್ಸೆ ಹೇಗೆ ಮಾಡಬೇಕು, ಒಬ್ಬ ವ್ಯಕ್ತಿಯ ಕೈ,ಕಾಲಿಗೆ ಮತ್ತು ಭುಜಕ್ಕೆ ಪೆಟ್ಟು ಬಿದ್ದು ಮುರಿದಾಗ ಮಾಡಬಹುದಾದ ಚಿಕಿತ್ಸೆ,ಭೂಕಂಪದ ಮತ್ತು ಪ್ರವಾಹದ ಸಂದರ್ಭದಲ್ಲಿ ಮನೆಯಲ್ಲಿರುವ ವಸ್ತುಗಳನ್ನು ಬಳಸಿ ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಬಹುದು ಎಂಬುದರ ವಿವರಣೆಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ದೇವರಾಜ್ ಇಕ್ಕೇರಿ ತಿಳಿಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ಉಪನ್ಯಾಸಕಿ ಮಧುರಾ ಸ್ವಾಗತಿಸಿ, ವಂದಿಸಿದರು
























