ಸುಳ್ಯ: ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸುಳ್ಯ ತಾಲೂಕಿನ ನಿಂತಿಕಲ್ಲಿನಿಂದ ಸುಳ್ಯದ ತನಕದ ಬೃಹತ್ ವಾಹನ ಜಾಥಾ-ಪ್ರತಿಭಟನೆಗೆ ಮಂಗಳವಾರ ಬೆಳಿಗ್ಗೆ ನಿಂತಿಕಲ್ಲು ವೃತ್ತದ ಬಳಿ ಚಾಲನೆ ನೀಡಲಾಯಿತು.

ನ್ಯಾಯ ಎಲ್ಲಿದೆ ? ಎಂಬ ಘೋಷ ವಾಕ್ಯದೊಂದಿಗೆ ನಡೆಯುತ್ತಿರುವ ವಾಹನ ಜಾಥಾಕ್ಕೆ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರು ಪಾಲ್ಗೊಂಡಿದ್ದರು. ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಈ ಬೃಹತ್ ವಾಹನಜಾಥಾದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
























