ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಪುತ್ತೂರು ಶಾಖಾ ಕಟ್ಟಡದಲ್ಲಿ ನೂತನ ಎಟಿಎಂ ಉದ್ಘಾಟನೆಗೊಳ್ಳಲಿದ್ದು, ಉದ್ಘಾಟನಾ ಸಮಾರಂಭ ಆ.14 ಸೋಮವಾರ ಬೆಳಿಗ್ಗೆ 11 ಗಂಟೆಗೆ ಬ್ಯಾಂಕ್‍ನ ಸಭಾಭವನದಲ್ಲಿ ನಡೆಯಲಿದೆ ಎಂದು ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ತಿಳಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 1914 ರಲ್ಲಿ ಮೊಳಹಳ್ಳಿ ಶಿವರಾಯರ ನೇತೃತ್ವದಲ್ಲಿ ಪುತ್ತೂರಿನಲ್ಲಿ ಬ್ಯಾಂಕ್ ಸ್ಥಾಪನೆಗೊಂಡಿದ್ದು, ಇದೀಗ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರ ನಾಯಕತ್ವದಲ್ಲಿ ಬೆಳೆದು ಸಾಧನೆಯತ್ತ ದಾಪುಗಾಲಿಟ್ಟಿದೆ ಎಂದು ತಿಳಿಸಿದರು.
ಎಟಿಎಂ ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಲಿದ್ದು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ, ನವದೆಹಲಿ ಇಫ್ಕೋ ನಿರ್ದೇಶಕ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮೆನೆಜಿಂಗ್ ಟ್ರಸ್ಟೀ ಸಹಕಾರರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸುವರು. ನವೀಕೃತ ಡಿ.ಆರ್.ಸೆಂಟರನ್ನು ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್ ಉದ್ಘಾಟಿಸಲಿದ್ದು, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಗೌರವ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ಮೇಲ್ವಿಚಾರಕರಾದ ವಸಂತ, ಶರತ್ ಕುಮಾರ್, ಪುತ್ತೂರು ಶಾಖೆಯ ಜಲಜಾ, ಹರೀಶ್ ಕುಮಾರ್ ಉಪಸ್ಥಿತರಿದ್ದರು.