ಸವಣೂರು: ತೆಂಗಿನಕಾಯಿ ಕೀಳುವ ಸಂದರ್ಭ ತೆಂಗಿನ ಮರದಿಂದ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿಯಲ್ಲಿ ನಡೆದಿದೆ.
ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದ ಸುಚಿತ್ರ (30) ಮೃತಪಟ್ಟವರು.
ಸುಚಿತ್ರ ಅವರು ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದು, ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು. ಸುಚಿತ್ರ ರವರ ಈ ಕಾಯಕಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.