ಪುತ್ತೂರು: ಕೆದಿಲ ಗ್ರಾಮ ಪಂಚಾಯತಿಗೆ ನಡೆದ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದ್ದು, ಬಿಜೆಪಿ ಬೆಂಬಲಿತ ಮೂವರು ಸದಸ್ಯರಿಗೆ ಹಣ ಮತ್ತು ಅಧಿಕಾರದ ಅಮಿಷ ತೋರಿಸಿ ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ ಎಂದು ಪುಣಚ ಮಹಾಶಕ್ತೀ ಕೇಂದ್ರ ಅಧ್ಯಕ್ಷ ಹರಿಪ್ರಸಾದ್ ಯಾದವ್ ಆರೋಪಿಸಿದ್ದಾರೆ.
ಬಿಜೆಪಿ ಬೆಂಬಲದಿಂದ ಗೆದ್ದು ಬಂದು ಇದೀಗ ಕಾಂಗ್ರೇಸ್ ಸೇರಿರುವ ಸದಸ್ಯರು ಪಾರ್ಟಿಗೆ ಮತ್ತು ಕಾರ್ಯಕರ್ತರಿಗೆ ದ್ರೋಹ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಅವರು ಸದಸ್ಯತನಕ್ಕೆ ರಾಜೀನಾಮೆ ನೀಡಿ ಅದೇ ವಾರ್ಡಿನಲ್ಲಿ ಕಾಂಗ್ರೇಸಿನಿಂದ ಗೆದ್ದು ತೋರಿಸಲಿ ಎಂದು ಸವಾಲೆಸೆದಿದ್ದಾರೆ.