ಪುತ್ತೂರು: ಕರಾಟೆ ಪ್ರಪಂಚದಾದ್ಯಂತ ಅಭ್ಯಾಸ ಮಾಡುವ ಅಗ್ರ ಸಮರ ಕಲೆಗಳಲ್ಲಿ ಒಂದಾಗಿದೆ. ಕರಾಟೆ ಕಲೆ ಆತ್ಮರಕ್ಷಣೆಗಿದ್ದು ಇದರ ತರಬೇತಿ ಪಡೆಯುವುದರಿಂದ ಆತ್ಮಬಲ ಮತ್ತು ಮಾನಸಿಕವಾಗಿ ಸದೃಢದ ಜತೆಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರ ಶಿವಪ್ರಸಾದ್ ಡಿ. ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರಾಟೆ ಸಮನ್ವಯವನ್ನು ಅಭಿವೃದ್ಧಿಪಡಿಸುತ್ತದೆ. ಮತ್ತು ಶಕ್ತಿ ನಮ್ಯತೆಯನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಕರಾಟೆ ಕೌಶಲ ತರಬೇತಿ ಸ್ವಯಂ ರಕ್ಷಣೆಗೆ ಸಹಕಾರಿಯಾಗಲಿದೆ. ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕು. ಸುಮಾ ಭಟ್ ಸ್ವಾಗತಿಸಿ, ವಂದಿಸಿದರು.