ಪುತ್ತೂರು: ಸರಕಾರಿ ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಗಳನ್ನು ನೀಗಿಸಿ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಸರಕಾರ ಒತ್ತು ನೀಡಲಿದೆ. ಈ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ವೃದ್ಧಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ನೆಟ್ಟಣಿಗೆ ಮುಡ್ನೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿವೇಕ ತರಗತಿ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.
ಶಾಲೆಗಳಲ್ಲಿ ಕೊಠಡಿಯ ಕೊರತೆಯನ್ನು ಬಹುತೇಕ ಪರಿಹರಿಸಲಾಗಿದೆ. ಶಾಲಾ ಪ್ರಾರಂಭದ ವೇಳೆಯೇ ಶಿಕ್ಷಕರ ಕೊರತೆ ಇರುವಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 13,500 ಶಿಕ್ಷಕರ ನೇಮಕಾತಿ ಶೀಘ್ರವೇ ಆಗಲಿದ್ದು ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾದ ಬಳಿಕ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ ಹೊರಡಿಸಲಿದೆ ಎಂದು ಹೇಳಿದ ಅವರು, ಸರಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ತರಬೇತಿ ಪಡೆದ ಶಿಕ್ಷಕರಿದ್ದಾರೆ. ಈ ವಿಚಾರ ಬಹುತೇಕರಿಗೆ ಗೊತ್ತಿಲ್ಲ. ಶಿಕ್ಷಕ ಪದವಿ ಮಾಡಿದ ಬಳಿಕ ಅವರಿಗೆ ಉನ್ನತ ತರಬೇತಿಯನ್ನು ನೀಡುವ ಮೂಲಕ ಅವರನ್ನು ಶಿಕ್ಷಕ ವೃತ್ತಿಗೆ ಕಳುಹಿಸಲಾಗುತ್ತಿದೆ ಇದು ಸರಕಾರಿ ವ್ಯವಸ್ಥೆಯಲ್ಲಿ ಮಾತ್ರ ಕಾಣಲು ಸಾಧ್ಯವಾಗಿದೆ ಎಂದು ಹೇಳಿದರು.
ಶಾಲಾ ಕಾರ್ಯಾಧ್ಯಕ್ಷರಾದ ಶ್ರೀರಾಂ ಪಕ್ಕಳ ಮಾತನಾಡಿ, ನೆಟ್ಟಣಿಗೆ ಮುಡ್ನೂರು ಪ್ರೌಢ ಶಾಲೆಗೆ ತಾಲೂಕಿನಲ್ಲಿ ಅತ್ಯಂತ ಹೆಚ್ಚು ಜಮೀನು ಹೊಂದಿದೆ. ಇಲ್ಲಿ ಪ್ರೌಢ ಶಾಲೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳಿದ್ದು ಗಡಿ ಗ್ರಾಮವಾದ ಈ ಪ್ರದೇಶದಲ್ಲಿ ಪಿಯು ಶಿಕ್ಷಣವನ್ನು ಪ್ರಾರಂಭಿಸುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಕಾಂಗ್ರೆಸ್ ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು, ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ಗ್ರಾಪಂ ಸದಸ್ಯರುಗಳಾದ ಲಲಿತ ಮೇನಾಲ, ಲಲಿತಾ ಸಾಂತ್ಯ, ಇಂದಿರಾ, ವೆಂಕಪ್ಪ ನಾಯ್ಕ, ಇಬ್ರಾಹಿಂ ,ರಾಮಮೇನಾಲ, ಸುಮಯ್ಯ ಅಝೀಝ್, ಪ್ರದೀಪ್ ರೈ ಕರ್ನೂರು,ಎಸ್‌ಡಿಎಂಸಿ ಸದಸ್ಯರುಗಳಾದ ಅಬ್ದುಲ್ ಖಾದರ್ ಸುರಳಿಮೂಲೆ, ವಿಕ್ರಂ ರೈ ಸಾಂತ್ಯಸೂಪಿ ವಾಟೆಡ್ಕ, ಮಹಮ್ಮದ್ ಪಳ್ಳತ್ತೂರು, ವಲಯ ಕಾಂಗ್ರೆಸ್ ಅಧ್ಯಕ್ಷ ಎನ್ ಮೂಸಾನ್, ಅಬೂ ಮೆನಾಲ, ಸುರೇಶ್ ಮೇನಾಲ, ಕೆ ಎಂ ಮೇನಾಲ, ವಿಜಯಾ ರೈ ಕರ್ನೂರು, ನಾರಾಯಣ ನಾಯ್ಕ ನಾಗನಡ್ಕ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಪ್ರೇಮ್‌ಕುಮಾರ್ ವಂದಿಸಿದರು. ಶಿಕ್ಷಕರಾದ ಯಶೋಧ, ಪುರುಷೋತ್ತಮ, ಉದಯ, ದೇವಿಪ್ರಕಾಶ್, ಇಂದಿರಾ ವಿವಿಧ ಕಾರ್ಯಕ್ರಮ ನಿರೂಪಿಸಿದರು.