ಬೆಂಗಳೂರು: ಡಾ. ಮೀರಾಮಣಿಯವರು ಗ್ರಂಥಾಲಯ ಅಭಿವೃದ್ಧಿ ಹಾಗೂ ಗ್ರಂಥಾಲಯ ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರಕಾರವು 2023ರ “ಉತ್ತಮ ಗ್ರಂಥಪಾಲಕರು” ಎಂಬ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಈ ಪೈಕಿ ಪುತ್ತೂರು ತಾಲೂಕಿನ ಕುದ್ಮಾರು ಗ್ರಾಮದ ದಿ.ನೂಜಿ ಲಿಂಗಪ್ಪ ಗೌಡ, ದುಗ್ಗಮ್ಮ ದಂಪತಿ ಪುತ್ರಿ ಡಾ.ಮೀರಾರಾಣಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಬೆಂಗಳೂರು ಹಂಪಿನಗರದ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಲಾದ ಗ್ರಂಥಾಲಯ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಎಸ್. ಮಧು ಬಂಗಾರಪ್ಪರವರು ನೀಡಿ ಪುರಸ್ಕರಿಸಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಎಸ್ ಹೊಸಮನಿ ಕಾರ್ಯವನ್ನು ಸಂಯೋಜಿಸಿದ್ದರು.
ಡಾ. ಮೀರಾಮಣಿ ಸುಳ್ಯ ತಾಲೂಕು ಎಡಮಂಗಲ ಗ್ರಾಮದ ಪರ್ಲ ಆನಂದ್ ಪಿ. ಎಸ್. ಅವರ ಪತ್ನಿ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು, ಸರಕಾರಿ ಪ್ರೌಢಶಾಲೆ ಎಡಮಂಗಲ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕಾಣಿಯೂರು ಇಲ್ಲಿಯ ಹಳೆವಿದ್ಯಾರ್ಥಿನಿ. ಪ್ರಸ್ತುತ ಬೆಂಗಳೂರಿನ ಜೈನ್ ಯುನಿವರ್ಸಿಟಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.