ಪುತ್ತೂರು: ಬಂಟರ ಸಮುದಾಯ ಎನ್ನುವುದು ನಮಗೆ ಹೆಮ್ಮೆ ಎನಿಸಿದ್ದು, ಸಂಘ ಇಂದು ವಿಸ್ತಾರವಾಗಿ ಬೆಳೆದು ಫಲ ನೀಡಿದೆ ಎಂದು ಪುತ್ತೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಹಾಗೂ ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಹೇಳಿದರು.
ಅವರು ಭಾನುವಾರ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಮಹಿಳಾ, ಯುವ, ವಿದ್ಯಾರ್ಥಿ ಬಂಟರ ಸಂಘದ ಸಹಯೋಗದಲ್ಲಿ ಕೊಂಬೆಟ್ಟು ಬಂಟರ ಭವನದಲ್ಲಿ ಜರಗಿದ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಚಿನ್ನದ ಪದಕ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು. ಸಂಘದ ನಿರಂಜನ್ ರೈ ಮಠಂತಬೆಟ್ಟು, ಬಂಟರ ಯಾನೆ ನಾಡವರ ಮಾತೃಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ್ ಕುಮಾರ್ ರೈ, ರೋಟರಿ ಜಿಲ್ಲೆ 1181 ಇದರ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ಮಿತ್ರಂಪಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬಂಟ ಸಮುದಾಯದ 13 ಮಂದಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಶಿಕ್ಷಕ ಶ್ರೀಧರ ರೈ ಚೆನ್ನಮಣೆ ಆಟವನ್ನು ಆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ ಸ್ವಾಗತಿಸಿದರು. ಕೋಶಾಧಿಕಾರಿ ಕೃಷ್ಣಪ್ರಸಾದ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರ್ವಹಿಸಿದರು,