ಬೆಳ್ತಂಗಡಿ: ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು, ಮನೆಯಲ್ಲಿದ್ದ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ನಡೆದಿದೆ.
ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ(19) ಎಂಬವರು ಆ.13ರಂದು ಮೃತಪಟ್ಟ ಯುವತಿ. ಮಂಗಳೂರಿನ ಕಾಲೇಜೊಂದರ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದರು.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.
























