ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವ ಕಿಲ್ಲೆ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೊತಿ ಸ್ಮಾರಕದ ಬಳಿ ನಡೆಯಿತು.
ಧ್ವಜಾರೋಹಣದ ಮೊದಲು ಪೊಲೀಸ್ ಇಲಾಖೆ, ಗೃಹರಕ್ಷಕ ದಳ ಹಾಗೂ ವಿವಿಧ ಶಾಲೆಗಳ ಎನ್ ಸಿಸಿ ಕೆಡೆಟ್‍ಗಳಿಂದ ಆಕರ್ಷಕ ಬ್ಯಾಂಡ್, ವಾದ್ಯಗಳೊಂದಿಗೆ ಆಕರ್ಷಕ ಪಥ ಸಂಚಲನ ನಡೆಯಿತು.
ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿ, ಪೂರ್ವಜರ ತ್ಯಾಗ, ಬಲಿದಾನಗಳಿಂದ ನಡೆದ ಚಳುವಳಿಯಿಂದಾಗಿ ಸ್ವಾತಂತ್ರ್ಯ ಭಾರತವನ್ನು ಇಂದು ನಾವು ಕಾಣಬಹುದು. ಸ್ವಾತಂತ್ರೋತ್ತರ ಸಂದರ್ಭದಲ್ಲಿ ದೇಶ 500 ಪ್ರಾಂತ್ಯಗಳಾಗಿ ಹರಿದು ಹಂಚಿ ಹೋಗಿತ್ತು. ಇದೀಗ ಸ್ವಾತಂತ್ರ್ಯ ದೊರೆತು ಏಳು ದಶಕಗಳಾಗಿದ್ದು, ಎಂಟನೇ ದಶಕಗಳತ್ತ ಕಾಲಿಡುತ್ತಿದ್ದೇವೆ. ಬಳಿಕ ದಿನಗಳಲ್ಲಿ ನಮ್ಮ ದೇಶ ತಂತ್ರಜ್ಞಾನ, ಶಿಕ್ಷಣ, ಕ್ರೀಡೆ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಇತರ ದೇಶಗಳನ್ನು ಬೆರಗು ಮಾಡುವಂತೆ ಮಾಡಿದೆ. ಈ ನಿಟ್ಟಿನಲ್ಲಿ ನಮ್ಮ ಗುರಿ ದೇಶದ ಏಳಿಗೆಗಾಗಿ, ಏಕತೆಗಾಗಿ ಮುಡಿಪಾಗಿವುದು ಅಗತ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ತಾಪಂ ಕಾರ್ಯನಿವರ್ಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್., ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ಗಾನ ಕುಮಾರ್ ತಹಶೀಲ್ದಾರ್ ಶಿವಶಂಕರ್ ಉಪಸ್ಥಿತರಿದ್ದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.