ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಚಿಕಿತ್ಸಾ ವೆಚ್ಚದ ಹಣ ಹಸ್ತಾಂತರ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ ‘ಬಿ’ ಕಾರ್ಯಕ್ಷೇತ್ರದ ‘ಶ್ರೀ ಮಂಜುನಾಥ’ ಸ್ವ ಸಹಾಯ ಸಂಘದ ಸದಸ್ಯ ಶಿವಾನಂದರವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ರೂ. 25,000/- ಕ್ರಿಟಿಕಲ್ ಇಲ್ನೆಸ್ ಫಂಡ್ ನ್ನು ಹಸ್ತಾಂತರಿಸಲಾಯಿತು.

ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಾರದ,  ಸೇವಾಪ್ರತಿನಿಧಿ ಜಯಂತಿ, ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ, ಸೌಲಭ್ಯವನ್ನು ಒದಗಿಸಿಕೊಡುವಲ್ಲಿ ವಿಶೇಷ ಮುತುವರ್ಜಿ ವಹಿಸಿ ಸಹಕಾರ ನೀಡಿರುವ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೆದಿಲ ಸದಸ್ಯರಾದ ಜಗದೀಶ, ಶೀನಪ್ಪ, ಗಿರೀಶ, ವೆಂಕಪ್ಪ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top