ಪುತ್ತೂರು: ಕಾಣಿಯೂರು ಗ್ರಾಪಂನಲ್ಲಿ 77 ನೇ ವರುಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಪಂಚಾಯಿತಿ ಅಧ್ಯಕ್ಷೆ ಲಲಿತಾ ದರ್ಖಾಸ್ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಪಂಚಾಯತ್ ನೆಲೆಯಿಂದ ಖರೀದಿಸಿದ ಶವ ಪೆಟ್ಟಿಗೆಯನ್ನು ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು. ಲೋಕಾರ್ಪಣೆ ಮಾಡಿದರು.
ಪಂಚಾಯಿತಿ ಉಪಾಧ್ಯಕ್ಷ ಗಣೇಶ್ ಕೆ.ಎಸ್. ಉದನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಶವ ಪೆಟ್ಟಿಗೆಯನ್ನು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಉಚಿತವಾಗಿ ಹಾಗೂ ಪರ ಊರಿನ ಜನರಿಗೆ ನಿಗದಿತ ಬಾಡಿಗೆದರದಲ್ಲಿ ನೀಡುವುದಾಗಿ ತಿಳಿಸಿದರು. ಬಳಿಕ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪಂಚ ಅಭಿಯಾನದಡಿ ಕೋಟಿ ವೃಕ್ಷ – ವಸುದ ವಂದನ್ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ನೆರವೇರಿಸಲಾಯಿತು.
ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ,ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ನಾಗರಿಕ ಬಂಧುಗಳು ಉಪಸ್ಥಿತರಿದ್ದರು.