ಮಂಗಳೂರು: ಎಚ್.ಪಿ.ಗ್ಯಾಸ್ ಏಜೆನ್ಸಿಗಳಿಂದ ತೈಲಕಂಪೆನಿಯ ನಿರ್ದೇಶಾನುಸಾರ ಅನಿಲ ಸುರಕ್ಷತೆಯ ತಪಾಸಣೆಯನ್ನು ಗ್ರಾಹಕರ ಸುರಕ್ಷತಾ ದೃಷ್ಟಿಯಿಂದ ಕಡ್ಡಾಯಗೊಳಿಸಿದ್ದು, ಗ್ರಾಹಕರ ಮನೆಗೆ ಬಂದು ಅಡುಗೆ ಅನಿಲ ತಪಾಸಣೆ ನಡೆಸುವುದು ಕಡ್ಡಾಯವಲ್ಲ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಕಟಣೆ ನೀಡಿದ್ದಾರೆ.
ಪೆಟ್ರೋಲಿಯಮ್ ಕಂಪೆನಿಯ ಗುರುತು ಚೀಟಿ ಹೊಂದಿರುವ ವ್ಯಕ್ತಿಗಳು ತರಳಿ ಅಡುಗೆ ಕೋಣೆಯಲ್ಲಿ ಗ್ಯಾಸ ಅನ್ನು ಪರಿಶೀಲಿಸಲಿದ್ದು, ಸೇವಾ ಶುಲ್ಕ ರೂ.236 ನ್ನು ತೆರಬೇಕೆಂದೂ, ರಬ್ಬರ್ ಟ್ಯೂಬ್, ಬದಲಾಯಿಸಬೇಕಾದಲ್ಲಿ ರೂ.19೦ ಅನ್ನು ನೀಡಬೇಕೆಂಬುದಾಗಿ ತಿಳಿಸಲಾಗಿರುತ್ತದೆ. ಈ ರೀತಿಯ ಅನಿಲ ಸುರಕ್ಷತೆಯ ತಪಾಸಣೆಯು ಗ್ರಾಹಕರಿಗೆ ಕಡ್ಡಾಯವಾಗಿರುವದಿಲ್ಲ, ಗ್ಯಾಸ್ ಏಜೆನ್ಸಿಯವರು ಗ್ರಾಹಕರಿಗೆ ಸರಿಯಾದ ಮಾಹಿತಿ ನೀಡಿ ಗ್ರಾಹಕರು ಬಯಸಿದ್ದೇ ಆದಲ್ಲಿ ಅವರ ಅನುಮತಿ ಮೇರೆಗೆ ಮಾತ್ರ ಗ್ರಾಹಕರ ಮನೆಯೊಳಗೆ ಹೋಗಿ ಅನಿಲ ತಪಾಸಣೆ ಮಾಡಬಹುದು.
ಸಾರ್ವಜನಿಕರು ತಮ್ಮ ಸುರಕ್ಷತೆಗಾಗಿ ಅಡುಗೆ ಅನಿಲ ತಪಾಸಣೆಯನ್ನು ಕೈಗೊಳ್ಳಬೇಕಾಗಿದ್ದಲ್ಲಿ ತಮ್ಮ ಗ್ಯಾಸ್ ಏಜೆನ್ಸಿಗೆ ಕರೆ ಮಾಡಿ ತಪಾಸಣೆಯನ್ನು ಕೈಗೊಳ್ಳಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.