ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ಆ.18 ರಂದು ನಡೆಯಲಿರುವ ತಿರಂಗಾ ಯಾತ್ರೆಯ ಪೂರ್ವಭಾವಿ ಸಭೆ ಗುರುವಾರ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ತಿರಂಗ ಯಾತ್ರೆ ಕಿಲ್ಲೇ ಮೈದಾನದ ಬಳಿಯಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದಿಂದ ಹೊರಟು ಪುತ್ತೂರು ಟೌನ್ ಬ್ಯಾಂಕ್ ನಲ್ಲಿ ನಡೆಯುವ ಸಭಾ ಕಾರ್ಯಕ್ರಮದೊಂದಿಗೆ ಸಮಾಪನಗೊಳ್ಳಲಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಪಕ್ಷದ ಪ್ರಮುಖರಾದ ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ಗೋಪಾಲ ಕೃಷ್ಣ ಹೇರಳೆ, ಬೂಡಿಯಾರ್ ರಾಧಾಕೃಷ್ಣ ರೈ, ಜಿವಂಧರ್ ಜೈನ್ , ಚಂದ್ರಶೇಖರ ರಾವ್ ಬಪ್ಪಳಿಗೆ, ನಗರ ಮತ್ತು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೆಂದ್ರದ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.