ಬಂಟ್ವಾಳ ಸಗಟು ಗೋದಾಮಿನಿಂದ ಕೋಟಿಗೂ ಮಿಕ್ಕಿ ಮೌಲ್ಯದ ಅಕ್ಕಿ ನಾಪತ್ತೆ | ತನಿಖೆ ಆರಂಭ

ಬಂಟ್ವಾಳ: ನ್ಯಾಯ ಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಅರ್ಹರಿಗೆ ವಿತರಣೆ ಆಗಬೇಕಾಗಿದ್ದ ಪಡಿತರ ಅಕ್ಕಿ ದಾಸ್ತಾನು ಮಳಿಗೆಯಲ್ಲಿ ಸುಮಾರು 1.32 ಕೋಟಿ ರೂ ಮೌಲ್ಯದ ಅಕ್ಕಿ ನಾಪತ್ತೆಯಾಗಿದ್ದು, ಈ ಕುರಿತು ತನಿಖೆ ಆರಂಭಗೊಂಡಿದೆ.

ಈ ಕುರಿತು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮಂಗಳೂರು ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ಎಂಬವರು ದೂರು ನೀಡಿದ್ದಾರೆ.

ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಕೆ.ಎಸ್.ಆರ್.ಟಿ.ಸಿ. ಡಿಪೋ ಎದುರು ಇರುವ ಸಗಟು ಗೋದಾಮಿನಿಂದ ಬಂಟ್ವಾಳ ನಗರಕ್ಕೆ ಪಡಿತರ ಅಕ್ಕಿ ಸರಬರಾಜು ಆಗುತ್ತಿರುತ್ತದೆ. ಪಡಿತರ ವಿತರಣೆಯು ವಿಳಂಬವಾಗುತ್ತಿರುವ ಬಗ್ಗೆ ಅನುಮಾನ ಬಂದು ಜಿಲ್ಲಾ ವ್ಯವಸ್ಥಾಪಕರ ಮೌಖಿಕ ಆದೇಶದ ಮೇಲೆ ಆಗಸ್ಟ್ 17ರಂದು ಬಂಟ್ವಾಳದ ಸಗಟು ಮಳಿಗೆಗೆ ಬಂದು ದಾಸ್ತಾನು ಪರಿಶೀಲಿಸಿದಾಗ, ಫಿಸ್ಟ್ ತಂತ್ರಾಂಶದ ಪ್ರಕಾರ ಸಗಟು ಮಳಿಗೆಯಲ್ಲಿ ಇರಬೇಕಾಗಿದ್ದ ಭೌತಿಕ ದಾಸ್ತಾನುವಿಗಿಂತ ಅಂದಾಜು 1,32,36,030 ರೂ ಮೌಲ್ಯದ  3892 ಕ್ವಿಂಟಾಲ್ ಅಕ್ಕಿ ಕೊರತೆ ಇರುವುದು ಕಂಡು ಬಂದಿರುತ್ತದೆ. ಈ ಬಗ್ಗೆ ಬಂಟ್ವಾಳ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ನಿ) ಗೋದಾಮಿನ ನಿವಾರ್ಹಕರಾಗಿದ್ದ ಕಿರಿಯ ಸಹಾಯಕ ವಿರುದ್ದ ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top